
ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಕೋಟ ಜಂಕ್ಷನ್ನಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ,ಗುರುದಾಸ್ ಶೆಣೈ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೋಟ ಸಮೀಪದ ಮಣೂರು ನಿವಾಸಿಯಾಗಿದ್ದ ಗುರುದಾಸ್ ಶೆಣೈ ಅವರು ರಸ್ತೆ ದಾಟುತ್ತಿದ್ದ ವೇಳೆ, ಉಡುಪಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಸೈಕಲ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗುರುದಾಸ್ ಶೆಣೈ ಅವರು ಸೈಕಲ್ನಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇತ್ತ ಸೈಕಲ್ಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುವನ್ನು ತಕ್ಷಣ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಜಾನೆಯ ಅಪಘಾತಕ್ಕೆ ಒಂದು ಜೀವ ಬಲಿ..!!
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now