

ಉಡುಪಿ-ಇಲ್ಲಿನ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರದಂದು ಟೊರ್ಪೆಡೋಸ್ ಲೆಜೆಂಡ್ಸ್ ಬ್ಯಾಡ್ಮಿಂಟನ್ ಲೀಗ್-2026 ಉದ್ಘಾಟನಾ ಸಮಾರಂಭ ನೆರವೇರಿತು.
ದೀಪ ಬೆಳಗಿಸಿ ಮಾತನಾಡಿದ ಕ್ರೀಡಾಪಟು ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ
“ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಲವಾರು ಕ್ರೀಡಾಕೂಟಗಳನ್ನು ಸಂಘಟಿಸಿ ಕ್ರೀಡಾಪಟುಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಕಲ್ಪಿಸಿದ್ದಾರೆ” ಎಂದರು.
ಈ ಸಂದರ್ಭ ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಜೈಸನ್ ಕ್ಸೇವಿಯರ್,ಸನವ್ ಥೋಮಸ್ ಮತ್ತು ಸುನಿಲ್ ಗ್ಲ್ಯಾಡ್ಸನ್ ಇವರನ್ನು ಸನ್ಮಾನಿಸಲಾಯಿತು.
ಉದ್ಘಾಟನಾ ವೇದಿಯಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಹಿರಿಯ ಕ್ರೀಡಾಪಟು ಪುಟ್ಟರಾಜು,ವಕೀಲರಾದ ಗಣೇಶ್ ಮಟ್ಟು,ಶಶಿಧರ್,ಸಿ.ಕೆ ನಾಯ್ಡು,ಶೇಖರ್ ಅಮೀನ್,ನಾರಾಯಣ ಶೆಟ್ಟಿ ಮಾರ್ಕೋಡು ಇನ್ನಿತರರು ಉಪಸ್ಥಿತರಿದ್ದರು.
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರೆ,ಶಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಈ ಪಂದ್ಯಾವಳಿಯಲ್ಲಿ ಹಲವಾರು ಅಂತಾರಾಷ್ಟ್ರೀಯ ಪದಕ ವಿಜೇತರು, ಅಂತಾರಾಷ್ಟ್ರೀಯ ಮಟ್ಟದ ಆಟಗಾರರು ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಿದ್ದರು.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now