ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅದೃಷ್ಟ ಚೀಟಿ ಫಲಿತಾಂಶ ಪ್ರಕಟ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅದೃಷ್ಟ ಚೀಟಿ ಫಲಿತಾಂಶ ಪ್ರಕಟ
0Shares

ಉದ್ಯಾವರ : ವಾರ್ಷಿಕ ವಿವಿಧ ಚಟುವಟಿಕೆಗಳ ಸಹಾಯಾರ್ಥವಾಗಿ ಲಯನ್ಸ್ ಕ್ಲಬ್ ಉದ್ಯಾವರ ಸನ್ಶೈನ್ ನಡೆಸಿದ ಅದೃಷ್ಟ ಚೀಟಿಯ ಫಲಿತಾಂಶವು ಪ್ರಕಟಗೊಂಡಿದೆ. ಉಡುಪಿ ಕಥೋಲಿಕ್ ಕ್ರೆಡಿಟ್ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಮತ್ತು ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷರಾದ ಲೂವಿಸ್ ಲೋಬೋ ಮತ್ತು ಮಮ್ಮಿ ಡಿಜಿಟಲ್ ಮಾಲಕ ಪ್ರೇಮ್ ಮಿನೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅದೃಷ್ಟ ಚೀಟಿಯ ಡ್ರಾ ನೆರವೇರಿಸಿದರು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲಯನ್ ರೋಯ್ಸ್ ಫೆರ್ನಾಂಡಿಸ್ ಸ್ವಾಗತಿಸಿದರೆ, ಕಾರ್ಯದರ್ಶಿ ಲಯನ್ ಜೋನ್ ಗೋಮ್ಸ್ ಧನ್ಯವಾದ ಸಮರ್ಪಿಸಿದರು. ಕೋಶಾಧಿಕಾರಿ ಲಯನ್ ವಿಲ್ಫ್ರೆಡ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now