
ಬಂಟಕಲ್, ನವೆಂಬರ್ 1, 2026: ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಗೌರವವನ್ನು ಸಾರುವ ಕನ್ನಡ ರಾಜ್ಯೋತ್ಸವವನ್ನು ಬಂಟಕಲ್ನ ಶ್ರೀ ದುರ್ಗಾಪರಮೇಶ್ವರಿ ಶಾಲೆಯಲ್ಲಿ ನವೆಂಬರ್ 1ರ ಭಾನುವಾರ ಬೆಳಿಗ್ಗೆ 9.30ಕ್ಕೆ ಲಯನ್ಸ್ ಕ್ಲಬ್ ಬಂಟಕಲ್ ಬಿ.ಸಿ. ರೋಡ್ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಬಂಟಕಲ್ ಬಿ.ಸಿ. ರೋಡ್ನ ಅಧ್ಯಕ್ಷರಾದ ಲಯನ್ ಟೋನಿ ಮೊನಿಸ್ ಅವರು ಮಾತನಾಡಿ, ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನದ ಆಚರಣೆಯಾಗಿರದೆ, ಕನ್ನಡ ಭಾಷೆ, ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ಮಹತ್ವದ ಹಬ್ಬವಾಗಿದೆ. ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಪ್ರೀತಿಸಿ, ಗೌರವಿಸಿ, ದೈನಂದಿನ ಜೀವನದಲ್ಲಿ ಕನ್ನಡವನ್ನು ಹೆಚ್ಚಾಗಿ ಬಳಸುವ ಮೂಲಕ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಕೈಜೋಡಿಸಬೇಕು ಎಂದು ತಿಳಿಸಿದ

ಶಾಲೆಯ ಆಡಳಿತ ಮಂಡಳಿಯ ಸದಸ್ಯರೂ ಹಾಗೂ ಲಯನ್ಸ್ ಕ್ಲಬ್ ಸದಸ್ಯರೂ ಆಗಿರುವ ಲಯನ್ ಕೆ. ಆರ್. ಪಟ್ಕರ್ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದೇ ಆಚರಿಸಬೇಕಾದ ಹಿನ್ನೆಲೆಯಲ್ಲಿ, ಭಾನುವಾರವಾಗಿದ್ದರೂ ಶಾಲೆಯ ವಿದ್ಯಾರ್ಥಿಗಳನ್ನು ಕರೆಸಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಶಾಲಾ ಅವಧಿಯಲ್ಲಿ ಪರಸ್ಪರ ಸಂವಹನ ನಡೆಸುವಾಗ ಕನ್ನಡ ಅಥವಾ ಇಂಗ್ಲಿಷ್ ಭಾಷೆಯನ್ನು ಬಳಸುವಂತೆ ಪ್ರೋತ್ಸಾಹಿಸಿದರು. ನಮ್ಮ ಮಾತೃಭಾಷೆಯಾದ ಕನ್ನಡವನ್ನು ದಿನನಿತ್ಯ ಮಾತನಾಡುವ ಮೂಲಕ ಮುಂದಿನ ಪೀಳಿಗೆಗೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಪೆಲ್ವಿನ್ ಕ್ವಾಡ್ರಸ್, ಖಜಾಂಚಿ ಲಯನ್ ಸ್ಯಾಮ್ಸನ್ ನೊರೊನ್ಹಾ, ಲಯನ್ ಪ್ರಮೀಳಾ ಲಸ್ರಾದೊ ಲೋಬೊ, ಲಯನ್ ರಾಜೇಶ್ ಜೋಗಿ ಹಾಗೂ ಲಯನ್ ರೊನಾಲ್ಡ್ ಕ್ವಾಡ್ರಸ್ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಗೀತಾ ಪಟ್ಕರ್ ಅವರು ವಂದನಾರ್ಪಣೆ ಸಲ್ಲಿಸಿದರು. ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಒಗ್ಗೂಡಿ ಕನ್ನಡ ರಾಜ್ಯೋತ್ಸವ ಗೀತೆಯನ್ನು ಹಾಡುವ ಮೂಲಕ ಕನ್ನಡಾಭಿಮಾನವನ್ನು ಮೆರೆದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.
ಕನ್ನಡ ಭಾಷೆಯ ಮೇಲಿನ ಅಭಿಮಾನ, ಗೌರವ ಮತ್ತು ಪ್ರೀತಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now