
ದಿನಾಂಕ 03/11/2026 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕ ಪಡೆ ತಂಡವು ಸಿಆರ್ಪಿ ಹಾಗೂ ಸಿಎಸ್ಒ ಇಲಾಖೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿತು.
ಈ ಸಂದರ್ಭದಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಸುಮಾರು 30 ಮಕ್ಕಳು ಯಾವುದೇ ರೀತಿಯ ಶಿಕ್ಷಣ ಪಡೆಯದೆ, ಶಾಲೆಗೆ ತೆರಳದೆ ಫ್ಯಾಕ್ಟರಿಯ ಸುತ್ತಮುತ್ತಲೇ ಕಾಲ ಕಳೆಯುತ್ತಿರುವುದು ಕಂಡುಬಂದಿತು.
6 ವರ್ಷ ಮೇಲ್ಪಟ್ಟ ಹಾಗೂ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು.
ನಂತರ 7 ಬಾಲಕಿಯರನ್ನು ಬಾಲಕಿಯರ ಬಾಲಮಂದಿರಕ್ಕೆ ಹಾಗೂ 23 ಬಾಲಕರನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now