ಮುದರಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ, ಗೃಹಲಕ್ಷ್ಮಿಫಲಾನುಭವಿಗಳ ಸಮಾವೇಶ

ಮುದರಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ, ಗೃಹಲಕ್ಷ್ಮಿಫಲಾನುಭವಿಗಳ ಸಮಾವೇಶ
0Shares

ಮುದರಂಗಡಿ ದಿ.06-11-2026, ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ಸೆಂಟ್ ಕ್ಸೇವಿಯರ್ ಚರ್ಚ್ ಆಡಿಟೋರಿಯಂನಲ್ಲಿ ಜರುಗಿತು
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವರು ವಿನಯ್ ಕುಮಾರ್ ಸೊರಕೆ ಹಾಗೂ ಗಣ್ಯರು ದೀಪವನ್ನು ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮದರಂಗಡಿ ಗ್ರಾಮೀಣ ಅಧ್ಯಕ್ಷರಾದ ಮೈಕಲ್ ರಮೇಶ್ ಡಿಸೋಜಾ ಸ್ವಾಗತವನ್ನು ಕೋರಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸನ್ಮಾನ್ಯ ಐವನ್ ಡಿಸೋಜ ಹಾಗೂ ವಿನಯ್ ಕುಮಾರ್ ಸೊರಕೆ ಅವರು ಕಾಂಗ್ರೆಸ್ನ ಬಾವುಟ ನೀಡಿ ಮೈಕಲ್ ರಮೇಶ್ ರವರನ್ನು ಅಧಿಕೃತವಾಗಿ ಮದರಂಗಡಿ ಗ್ರಾಮೀಣ ಅಧ್ಯಕ್ಷರು ಎಂದು ಘೋಷಿಸಿದರು.


ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ಗ್ರಾಮದ ಸಮಗ್ರ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.
ಬಡ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿಕೊಡುವುದು ಸೇರಿದಂತೆ ಜನರ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಉತ್ತಮ ಕೆಲಸಗಳನ್ನು ಮಾಡಿರುತ್ತೇನೆ. ನಾನು ಒಮ್ಮೆ ಬದ್ಧತೆ ತೊಟ್ಟರೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಮುದರಂಗಡಿ ಪ್ರದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರಕಾರದಿಂದ ಸುಮಾರು 22 ಕೋಟಿ ರೂ. ಅನುದಾನವನ್ನು ತರಲಾಗಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುವಂತೆ ಮಾಡಲಾಗಿದೆ ಎಂದು ಮೈಕಲ್ ರಮೇಶ್ ಡಿಸೋಜಾ ಹೇಳಿದರು.

ವೈ. ಸುಕುಮಾರ್ ಅವರು ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಜನರಿಗೆ ನೀಡಿದ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಅಭಿನಂದಿಸಿದರು.

ದೇವಕರ್ ಶೆಟ್ಟಿ ಅವರು ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಇಂದು ಆಧಾರ್ ಕಾರ್ಡ್ ಇ-ಕೆವೈಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಿನಯ್ ಕುಮಾರ್ ಸೊರಕೆ ಅವರು ಮಾತನಾಡಿ, ಡೇವಿಡ್ ಡಿಸೋಜಾ ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕರಾಗಿರದೆ, ಬಡವರು ಹಾಗೂ ಅಗತ್ಯವಿರುವ ಅನೇಕ ಜನರಿಗೆ ಸಹಾಯ ಮಾಡಿದ ಸಮಾಜಮುಖಿ ವ್ಯಕ್ತಿಯಾಗಿದ್ದಾರೆ. ಮುದರಂಗಡಿ ಪ್ರದೇಶದ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಇದೀಗ ಅವರ ಸ್ಥಾನವನ್ನು ಮೈಕಲ್ ರಮೇಶ್ ಡಿಸೋಜಾ ಅವರು ವಹಿಸಿಕೊಂಡಿದ್ದು, ಅವರೂ ಅದೇ ರೀತಿಯಲ್ಲಿ ಜನಸೇವೆಗೆ ಆದ್ಯತೆ ನೀಡಿ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಐವನ್ ಡಿಸೋಜಾ ಅವರು ಮಾತನಾಡಿ, ಇಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಭ್ರಮದ ದಿನವಾಗಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಉಳಿದಿದ್ದ ಮೂರು ತಿಂಗಳ ಹಣವನ್ನು ದೀಪಾವಳಿ ಸಂದರ್ಭದಲ್ಲಿ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದ್ದು, ಇಂದು ತಲಾ ₹6,000 ಹಣ ಜಮೆಯಾಗಲಿದೆ. ಒಟ್ಟುಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ) ರಾಜ್ಯಾದ್ಯಂತ ಈವರೆಗೆ ಒಟ್ಟು ₹1.54 ಲಕ್ಷ ಕೋಟಿ (₹1,54,000 ಕೋಟಿ) ಮೊತ್ತದ ಹಣವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಸರ್ಕಾರ ನೀಡಿದ ಮಾತನ್ನು ಉಳಿಸಿಕೊಂಡಿದೆ ಎಂದು ಹೇಳಿದರು.


ಅಲ್ಲದೆ, ಉದ್ಯೋಗವಿಲ್ಲದ ಪದವೀಧರರಿಗೆ ಯುವನಿಧಿ ಯೋಜನೆಯಡಿ ಮಾಸಿಕ ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500 ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ಇಂದು ಮುದರಂಗಡಿ ಗ್ರಾಮೀಣ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೈಕಲ್ ಡಿಸೋಜರವರಿಗೆ ಅಭಿನಂದಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಒಗ್ಗೂಡಿಸುವ ಹಾಗೂ ಪಕ್ಷಕ್ಕೆ ಕೆಲಸ ಮಾಡಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿಯನ್ನು ನೀಡಲಾಯಿತು.

ಕಾಪು ಬ್ಲಾಕ್ ಅಧ್ಯಕ್ಷರು ವೈ ಸುಕುಮಾರ್, ಕೆಪಿಸಿಸಿ ಕಾರ್ಯಧ್ಯಕ್ಷರು ರಾಜಶೇಖರ್ ಕೋಟ್ಯಾನ್,
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷೆ ಗೀತಾ ವಾಗ್ಳೆ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ನವೀನ್ ಚಂದ್ರ ಸುವರ್ಣ, ಪ್ರಚಾರ ಸಮಿತಿ ಅಧ್ಯಕ್ಷರು ಜಿತೇಂದ್ರ ಫಲಿಮಾರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ದಿವಾಕರ್ ಶೆಟ್ಟಿ, ನಮಿತಾ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮುದರಂಗಡಿ , ಅಲ್ಪಸಂಖ್ಯಾತ ಘಟಕ ಕಾಪು ಬ್ಲಾಕ್ ಕಾರ್ಯಧ್ಯಕ್ಷರು ರಿಯಾಜ್ ಮದರಂಗಡಿ, ಅಲ್ಪಸಂಖ್ಯಾತ ಘಟಕದ ಕಾಪು ಬ್ಲಾಕ್ ಅಧ್ಯಕ್ಷ ಹಾಸನಬ್ಬ ಶೇಕ್, ದಿl ಡೇವಿಡ್ ಡಿಸೋಜರವರ ಪುತ್ರ ಉದ್ಯಮಿ ಡಾಯ್ಸನ್ ಡಿಸೋಜಾ, ಯು ಸಿ ಶೇಕ್ ಹಬ್ಬ ಮಾಜಿ ತಾಲೂಕು ಪಂಚಾಯತ್ ಸದಸ್ಯರು,
ಜೆ ಬಾ ಸೆಲ್ವನ್ ರಾಷ್ಟ್ರೀಯ ಮಹಿಳಾ ಕಾರ್ಯದರ್ಶಿ, ವಿಲ್ಸನ್ ರೋಡ್ರಿಗಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಸುಧೀರ್ ಕುಮಾರ್ ಮರೋಲಿ ಕೆಪಿಸಿಸಿ ವಕ್ತಾರರು, ಮೆಲ್ವಿನ್ ಡಿಸೋಜಾ ಶಿರ್ವ ಗ್ರಾಮೀಣ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಅಂಗನವಾಡಿ ಶಿಕ್ಷಕರಿಗೆ, ಕಾರ್ಯಕರ್ತರಿಗೆ ಹಾಗೂ ಮೆಸ್ಕಾಂನ ಸಿಬ್ಬಂದಿಗಳಿಗೆ ಸುಮಾರು ಎಂಟು ಜನರಿಗೆ ಸನ್ಮಾನವನ್ನು ಮಾಡಲಾಯಿತು.ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಮುಖರಾದ ಸುನಿಲ್ ಡಿಸೋಜಾ ,ವಿನೋದ್, ಅರುಣ್, ಸೋಮನಾಥ್ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸರಿ ಸುಮಾರು 600ಕ್ಕೂ ಮಿಕ್ಕಿ ಸಾರ್ವಜನಿಕರು ಹಾಗೂ ಗೃಹಲಕ್ಷ್ಮಿ ಪಲಾನುಭವಿಗಳು ಉಪಸ್ಥಿತರಿದ್ದು ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕಾರ್ಯಕ್ರಮವನ್ನು ಸ್ಟೀವನ್ ಕುಲಾಸೋ ನಿರೂಪಿಸಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now