
ಮಕ್ಕಳ ಹಕ್ಕುಗಳ ಮಾಸೋತ್ಸವದ 24ನೇ ವರ್ಷದ ಅಂಗವಾಗಿ ಮುಲ್ಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳು, ರಕ್ಷಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಕರ್ನಾಟಕ ಇಕೋ ಟೂರಿಸಂ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆಶ್ರೀಮತಿ ಶಾಲೆಟ್ ಪಿಂಟೋ, ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಇನರ್ ವೀಲ್ ಕ್ಲಬ್‌ನ ಅಧ್ಯಕ್ಷರಾದ ಶ್ರೀಮತಿ ಅಮೂಲ್ಯ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಸೈಬರ್ ಅಪರಾಧಗಳು, ಆನ್‌ಲೈನ್ ಸುರಕ್ಷತೆ, POCSO ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ಕಾನೂನುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ಮಕ್ಕಳು ತಮ್ಮ ಹಕ್ಕುಗಳನ್ನು ಅರಿತುಕೊಳ್ಳುವುದರ ಜೊತೆಗೆ, ಯಾವುದೇ ರೀತಿಯ ಶೋಷಣೆ ಅಥವಾ ದೌರ್ಜನ್ಯಕ್ಕೆ ಒಳಗಾದಾಗ ಧೈರ್ಯವಾಗಿ ಧ್ವನಿ ಎತ್ತುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು.
ಮಕ್ಕಳ ಸುರಕ್ಷತೆ, ಶಿಕ್ಷಣ ಮತ್ತು ಸರ್ವತೋಮುಖ ಬೆಳವಣಿಗೆಗೆ ಇಂತಹ ಜಾಗೃತಿ ಕಾರ್ಯಕ್ರಮಗಳು ಮಹತ್ವದ ಕೊಡುಗೆ ನೀಡುತ್ತವೆ.
ಈ ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲಾ ಸಂಘಟಕರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಇನರ್ ವೀಲ್ ಕ್ಲಬ್‌ನ ಪದಾಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.
ಮಕ್ಕಳ ಹಕ್ಕುಗಳನ್ನು ಗೌರವಿಸೋಣ, ಅವರ ಭವಿಷ್ಯವನ್ನು ಸುರಕ್ಷಿತಗೊಳಿಸೋಣ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now