
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಪೂಜಾ ಕಾರ್ಯಕ್ರಮದಲ್ಲಿ ಬೈಂದೂರು ಮಾಜಿ ಶಾಸಕರಾದ ಶ್ರೀ ಕೆ. ಗೋಪಾಲ ಪೂಜಾರಿ ಅವರು ಭಾಗವಹಿಸಿ, ಪೊಲೀಸ್ ಸಿಬ್ಬಂದಿಗಳಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕರಾದ ಶ್ರೀ ಸಂತೋಷ ಕಾಯ್ಕಿಣಿ, ಠಾಣಾಧಿಕಾರಿಗಳಾದ ಶ್ರೀ ಸಯ್ಯದ್ ಗಡ್ಡೆದಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀ ಸದಾಶಿವ ಶೆಟ್ಟಿ ಶಂಕರನಾರಾಯಣ ಹಾಗೂ ಶ್ರೀ ಬಿ.ಕೆ. ಶ್ರೀನಿವಾಸ ಸೌಡ ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now