ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಿಬಿರ:

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಿಬಿರ:
0Shares

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರ:

ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗ, ಕುಟುಂಬ ವೈದ್ಯಕೀಯ ವಿಭಾಗ, ಸಮುದಾಯ ಆಂಕಾಲಜಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ ಹೆಚ್., ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಪತ್ತೆಹಚ್ಚುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಿಯಮಿತ ತಪಾಸಣೆಗೆ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞರಾದ ಡಾ. ಸಂದೀಪ್ ಎಂ.ಎಸ್., ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಸಮುದಾಯ ವೈದ್ಯಕೀಯ ವಿಭಾಗದ ಡಾ. ರತ್ನಾ ಜೆ., ಡಾ. ಸುಚರಿತಾ ಎಸ್. ಹಾಗೂ ಕುಟುಂಬ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅನುನಾ ವಿನೋದ್ ಹಾಗೂ ಡಾ. ಶ್ರೀರಕ್ಷಾ ಉಪಸ್ಥಿತರಿದ್ದರು.

ಶಿಬಿರದಲ್ಲಿ ಪ್ಯಾಪ್ ಸ್ಮಿಯರ್ ಪರೀಕ್ಷೆ ಹಾಗೂ ಸ್ವಯಂ ಸ್ತನ ಪರೀಕ್ಷೆ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು. ಶಿಬಿರದಲ್ಲಿ ವಿವಿಧ ಹಂತದಲ್ಲಿ ಮಹಿಳೆಯರಿಗೆ ಮಾಹಿತಿ ನೀಡಲಾಯಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now