
ಬಂಟ್ವಾಳ : ಮನೆಗೆ ನುಗ್ಗಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು – ಆರೋಪಿ ನ್ಯಾಯಾಲಯಕ್ಕೆ ಶರಣು.
ಬಂಟ್ವಾಳ : ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಗೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಪೊಲೀಸರು ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.
ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ (57) ಅವರು ಫೆ. 4 ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿದೆ. ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್ನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 17/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 331(3), 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಬಾ (21) ಎಂಬಾತ ನ್ಯಾಯಾಲಯಕ್ಕೆ ಹಾಜರಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಆತನನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now