
ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷರಾಗಿ ಜಯ್ ಶಾ ಎರಡನೇ ಅವಧಿಗೆ ಮರುನೇಮಕಗೊಂಡಿದ್ದಾರೆ. ಈ ಮೂಲಕ ಅವರು 2030ರ ಡಿಸೆಂಬರ್ ವರೆಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಬಾಲಿಯಲ್ಲಿ ಸೋಮವಾರ ನಡೆದ ICC ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ದೇಶಕರೊಬ್ಬರು ಜಯ್ ಶಾ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗದ ಕಾರಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಜಯ್ ಶಾ ಅವರ ಮೊದಲ ಮೂರು ವರ್ಷಗಳ ಅಧಿಕಾರಾವಧಿ ಮುಂದಿನ ವರ್ಷ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ಮಾಡದೆ ಆಡಳಿತವನ್ನು ಮುಂದುವರಿಸುವ ಉದ್ದೇಶದಿಂದ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ICC ನಿರ್ಧರಿಸಿದೆ.
2024ರ ಆಗಸ್ಟ್ ನಲ್ಲಿ ICC ಅಧ್ಯಕ್ಷರಾಗಿ ನೇಮಕಗೊಂಡಿದ್ದ ಜಯ್ ಶಾ, ಅದೇ ವರ್ಷದ ಡಿಸೆಂಬರ್ ನಲ್ಲಿ ಗ್ರೆಗ್ ಬಾರ್ಕ್ಲೇ ಅವರಿಂದ ಅಧಿಕಾರ ವಹಿಸಿಕೊಂಡಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now