
ಮಂಗಳೂರು, ನ.16: ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂಕನಾಡಿ ನಗರ ಠಾಣೆಯ ಪೊಲೀಸರು, ಮಂಗಳೂರು-ಕೇರಳ ರಾಷ್ಟ್ರೀಯ ಹೆದ್ದಾರಿಯ ಪಂಪೈಲ್ ಬಳಿ ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now