ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದು!

ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದು!
0Shares

ಇಂದು ಉಡುಪಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ (DCPU) ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳ (Child Welfare Police Officers – CWPOs) ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನಡೆಸಿದೆ.

ತರಬೇತಿಯಲ್ಲಿ ಮಕ್ಕಳ ಹಕ್ಕುಗಳು, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015, ಪೋಕ್ಸೋ (POCSO) ಕಾಯ್ದೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರ ಜವಾಬ್ದಾರಿಗಳು, ಮಕ್ಕಳ ಸ್ನೇಹಿ ಪೊಲೀಸ್ ವ್ಯವಸ್ಥೆ, ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.

ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳ ಸೂಕ್ಷ್ಮತೆ, ಸಂವೇದನಾಶೀಲತೆ, ಕಾನೂನುಬದ್ಧ ಕ್ರಮಗಳು ಹಾಗೂ ಮಕ್ಕಳ ಹಿತಾಸಕ್ತಿಗೆ ಆದ್ಯತೆ ನೀಡುವುದು ಅತ್ಯಂತ ಅಗತ್ಯ.

ಮಕ್ಕಳೊಂದಿಗೆ ವ್ಯವಹರಿಸುವ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ಕೇವಲ ಕಾನೂನು ಜಾರಿಗೊಳಿಸುವ ಅಧಿಕಾರಿಯಾಗಿರದೆ, ಮಕ್ಕಳ ಹಕ್ಕುಗಳ ರಕ್ಷಕನೂ ಆಗಿರಬೇಕು.

ಕಾರ್ಯಕ್ರಮವನ್ನು ಆಯೋಜಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದಗಳು.

ಮಕ್ಕಳಿಗೆ ಸ್ನೇಹಪರ ಪೊಲೀಸ್ ವ್ಯವಸ್ಥೆ ನಿರ್ಮಾಣವಾಗಲಿ; ಪ್ರತಿಯೊಂದು ಮಗುವಿಗೂ ನ್ಯಾಯ, ರಕ್ಷಣೆ ಮತ್ತು ಗೌರವ ದೊರೆಯಲಿ.

— ಡಾ. ತಿಪ್ಪೇಸ್ವಾಮಿ ಕೆ.ಟಿ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now