
ಶಿರ್ವ: ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ಹಾಗೂ ಪಂಚ ಗ್ಯಾರಂಟಿ ಸಂಭ್ರಮೋತ್ಸವವು ನವೆಂಬರ್ 23ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಶಿರ್ವದ ಮಹಿಳಾ ಸೌಧದಲ್ಲಿ ನಡೆಯಿತು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಹಾಗೂ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ದೊರೆಯುತ್ತಿರುವ ಪ್ರಯೋಜನಗಳ ಕುರಿತು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ ಸುಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ ಮಾತನಾಡಿ ಮುಂದಿನ ದಿನಗಳಲ್ಲಿ ತಮಗೆ ಗೃಹಲಕ್ಷ್ಮಿ ಹಾಗೂ ಪಂಚ ಗ್ಯಾರಂಟಿ ಬೇಕಾದಲ್ಲಿ ತಾವು ಮುಂದೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅವರನ್ನು ಗೆಲ್ಲಿಸಬೇಕಾಗಿ ವಿನಂತಿಸಿದರು.

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು ಮಾತನಾಡಿ ಶಿರ್ವ ದಲ್ಲಿ ಇದು 29ನೇ ಕಾರ್ಯಕ್ರಮ ರೂ.1,200ಕ್ಕೂ ಮಿಕ್ಕಿ ಜನ ಸೇರಿದನ್ನು ಕಂಡು ಸಂತೋಷ ಪಡುತ್ತೇನೆ, ಗ್ರಹಿಣಿ ಮನೆಯ ಯಜಮಾನಿ ಅವರ ಕಷ್ಟಕ್ಕೆ ಸ್ಪಂದಿಸುತ್ತಿರುವುದು ಕರ್ನಾಟಕ ಸರಕಾರದ ಮಹತ್ವದ ಯೋಜನೆಯ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500 ಮತ್ತು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗುತ್ತಿದೆ.ಇಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಭ್ರಮದ ದಿನವಾಗಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸಿದೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ದೀಪಾವಳಿ ಸಂದರ್ಭದಲ್ಲಿ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದ್ದು, ಇಂದು ತಲಾ ₹6,000 ಹಣ ಜಮೆಯಾಗಿದೆ.
ಒಟ್ಟಾರೆಯಾಗಿ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಗೆ ರಾಜ್ಯಾದ್ಯಂತ ಈವರೆಗೆ ಒಟ್ಟು ₹1.54 ಲಕ್ಷ ಕೋಟಿ (₹1,54,000 ಕೋಟಿ) ಮೊತ್ತದ ಹಣವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಸರ್ಕಾರ ನೀಡಿದ ಮಾತನ್ನು ಉಳಿಸಿಕೊಂಡಿದೆ ಎಂದು ಹೇಳಿದರು.

ಜನರ ಬದುಕಿನಲ್ಲಿ ಗ್ಯಾರಂಟಿ ಯೋಜನೆಗಳಿಂದ ಉಂಟಾಗಿರುವ ಬದಲಾವಣೆಗಳು, ಫಲಾನುಭವಿಗಳ ಅನುಭವಗಳು ಹಾಗೂ ಯೋಜನೆಗಳ ಪ್ರಯೋಜನಗಳ ಕುರಿತು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘಟಕರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿಲ್ಸನ್ ರೋಡ್ರಿಗಸ್ ತಿಳಿಸಿ ವೇದಿಕೆಯಲ್ಲಿದ್ದ ಸರ್ವರನ್ನು ಸ್ವಾಗತಿಸಿದರು

ಜಿಲ್ಲಾ ಗ್ಯಾರೆಂಟಿ ಸಮಿತಿಯ ಉಪಾಧ್ಯಕ್ಷರಾದ ಗೀತಾ ವಾಗ್ಲೆ , ಕಾಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹಸನಬ್ಬ ಶೇಕ್, ಖ್ಯಾತ ವಕೀಲರು ಸುಧೀರ್ ಕುಮಾರ್ ಮರೋಲಿ, ಮಾಜಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಶೆಟ್ಟಿ, ಮಾಜಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ರಾಜೇಶ್, ಗ್ಯಾರಂಟಿ ಸಮಿತಿಯ ಸದಸ್ಯರಾದ ಸುಧೀರ್ ಕುಮಾರ್, ಕೀರ್ತಿ ಕುಮಾರ್, ಲೀನಾ ವಿನಿತ ಡಿಸೋಜ, ಸವಿತಾ ಕುಂದರ್, ಪ್ರಭಾಕರ್ ಆಚಾರ್ಯ, ಗ್ರೇಸಿ ಕಾರ್ಡೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ 1,200 ಕ್ಕೂ ಮಿಕ್ಕಿ ಜನರು ಸೇರಿದ ಎಲ್ಲರೂ ಮಧ್ಯಾಹ್ನದ ಭೋಜನನ್ನು ಸ್ವೀಕರಿಸಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶಿರ್ವ ಕೆ ಆರ್ ಪಾಟ್ಕರ್ ಧನ್ಯವಾದ ಸಮರ್ಪಿಸಿದರು. ವಾಹನ ಸಂಚಾರ ಹಾಗೂ ಬಂದಬಸ್ತನ್ನು ಶಿರ್ವ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮರಬದ ಹಾಗೂ ಸಿಬ್ಬಂದಿಯವರು ಅಚ್ಚುಕಟ್ಟಾಗಿ ನೆರವೇರಿಸಿದರು. ಕಾರ್ಯಕ್ರಮವನ್ನು ಗಿಲ್ಬರ್ಟ್ ಪಿಂಟೊ ನಿರೂಪಿಸಿದರು.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now