
ಕಿರಿಮಂಜೇಶ್ವರ :ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರದ ವಿದ್ಯಾರ್ಥಿಗಳು ಕಂಚಿನ ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೇವನಹಳ್ಳಿ ಟೌನ್‌ನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ- ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಜನತಾ ಶಾಲೆಯ 8ನೇ ತರಗತಿಯ ಸಾಕ್ಷಿತ್ ಹಾಗೂ 17 ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಸಾಯಿನಾಥ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿಭಾವಂತ ಸ್ಪರ್ಧಿಗಳ ನಡುವೆ ತಮ್ಮ ಕೌಶಲ್ಯ, ಧೈರ್ಯ, ಶಿಸ್ತು ಹಾಗೂ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಈ ಸಾಧನೆ ಮಾಡಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯೋಪಾಧ್ಯಾಯರು, ಕರಾಟೆ ತರಬೇತುದಾರರು, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now