ಬೃಹತ್ ಉದ್ಯೋಗ ಮೇಳದ ಆಹ್ವಾನ – ಆದರ್ಶ ನರ್ಸಿಂಗ್ ಕಾಲೇಜಿಗೆ ಭೇಟಿ

ಬೃಹತ್ ಉದ್ಯೋಗ ಮೇಳದ ಆಹ್ವಾನ – ಆದರ್ಶ ನರ್ಸಿಂಗ್ ಕಾಲೇಜಿಗೆ ಭೇಟಿ
0Shares

ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಇದೇ ದಿನಾಂಕ 27-11-2026 ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದ ಆಮಂತ್ರಣ ಪತ್ರಿಕೆಯನ್ನು ಇಂದು ಆದರ್ಶ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಸಿಬ್ಬಂದಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಸಕಾರಾತ್ಮಕವಾಗಿ ಸ್ಪಂದಿಸಿ, ಉದ್ಯೋಗ ಮೇಳದ ಮಾಹಿತಿಯನ್ನು ಕಾಲೇಜಿನ ಎಲ್ಲಾ ಸಂಬಂಧಪಟ್ಟ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ತಲುಪಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಕಿಣಿ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.

ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಈ ಮಹತ್ವದ ಪ್ರಯತ್ನದಲ್ಲಿ ಶಿಕ್ಷಣ ಸಂಸ್ಥೆಗಳು ಕೈಜೋಡಿಸುತ್ತಿರುವುದು ಸಂತಸದ ವಿಷಯವಾಗಿದೆ.

ಯುವಕರಿಗೆ ಉದ್ಯೋಗ – ಭವಿಷ್ಯಕ್ಕೆ ಹೊಸ ದಾರಿ!

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now