
ಹೆಬ್ರಿ: ಹೆಬ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜು, ಹೆಬ್ರಿಯ ವಿದ್ಯಾರ್ಥಿನಿ ಐಶ್ವರ್ಯ ಶೆಟ್ಟಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳು ಕಾರ್ಕಳ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಹಾಗೂ ಹೆರ್ಗ ವಿಠಲ ಶೆಟ್ಟಿ ಪ್ರೌಢಶಾಲೆ ಕುಚ್ಚೂರು ಆಶ್ರಯದಲ್ಲಿ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡರು.
ವಿಜೇತ ವಿದ್ಯಾರ್ಥಿನಿಯನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾಯದರ್ಶಿ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now