
ಹೆಗ್ಗುಂಜೆ ರಾಜೀವ ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಹಾಲಾಡಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ ಎಂದು ಹಾಲಾಡಿ ಮರಳು ಚಿಕ್ಕು ದೈವಸ್ಥಾನದ ಆಡಳಿತ ಮೊಕ್ತೇಸರ ಅಮರನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸತೀಶ್ ಹೆಗ್ಡೆ ವಹಿಸಿದ್ದರು. ಪಥ ಸಂಚಲನದ ವಂದನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಜ್ಯೋತಿ ಕಿರಣ್ ಸ್ವೀಕರಿಸಿದರು, ಕ್ರೀಡಾ ದ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜನಾರ್ದನ್ ನೆರವೇರಿಸಿದರು. ನೂತನ ಕ್ರೀಡಾ ಜ್ಯೋತಿ ಪೀಠವನ್ನು ಡಿ ಆರ್ ಎಸ್ ಇನ್ಫೋಟೆಕ್ ಇಂಜಿನಿಯರ್ ಸಂದೇಶ್ ಶೆಟ್ಟಿ ಉದ್ಘಾಟಿಸಿದರು.


Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now