ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮಹಿಳಾ ತಂಡ 3-0 ಅಂತರದಿಂದ ಸೋಲುಂಡಿದೆ. ಆದರೆ, ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಸ್ಮೃತಿ ಮಂಧಾನ 105 ರನ್‌ಗಳ ಶತಕದ ಇನ್ನಿಂಗ್ಸ್ ಆಡಿದರು. ಇದು 2024ರಲ್ಲಿ ಅವರ ನಾಲ್ಕನೇ ಶತಕವಾಗಿದ್ದು, ಈ ಮೂಲಕ ಅವರು ಒಂದೇ ವರ್ಷದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಮಹಿಳಾ ಕ್ರಿಕೆಟ್ ಎಂಬ ದಾಖಲೆ ಬರೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲೂ ಸೋಲನುಭವಿಸಿದ ಭಾರತ ವನಿತಾ ಪಡೆ 3-0 ಅಂತರದಿಂದ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಆದಾಗ್ಯೂ ತಂಡದ ಪರ 3ನೇ ಏಕದಿನ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಕಾಂಗೂರಗಳ ನಾಡಲ್ಲಿ ಶತಕ ಸಿಡಿಸುವಲ್ಲಿ ಯಶಸ್ವಿಯಾದರು.
ಬ್ರಿಸ್ಬೇನ್‌ನ ಅಲನ್ ಬಾರ್ಡರ್ ಫೀಲ್ಡ್‌ನಲ್ಲಿ ನಡೆದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಏಕಪಕ್ಷೀಯವಾಗಿ ಸೋತಿದ್ದ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲೂ ಭಾರಿ ಅಂತರದ ಸೋಲನುಭವಿಸಿತು. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆದರೆ ಆಸ್ಟ್ರೇಲಿಯ ತಂಡ ದೊಡ್ಡ ಮೊತ್ತ ಕಲೆ ಹಾಕುವಲ್ಲಿ ಯಶಸ್ವಿಯಾಯಿತು. ಇದಕ್ಕೆ ಉತ್ತರವಾಗಿ ಭಾರತದ ಪರ ಅಬ್ಬರಿಸಿದ ಸ್ಮೃತಿ ಮಂಧಾನ ಈ ವರ್ಷದ ನಾಲ್ಕನೇ ಶತಕ
ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಸ್ಮೃತಿ ಮಂಧಾನ 103 ಎಸೆತಗಳಲ್ಲಿ ಶತಕ ಪೂರೈಸಿದರು. ಈ ವೇಳೆ ಅವರು 14 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದರು. ಆದರೆ, ಶತಕದ ನಂತರ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗದೆ 105 ರನ್ ಗಳಿಸಿ ಔಟಾದರು. 2024 ರಲ್ಲಿ ಇದು ಅವರ ನಾಲ್ಕನೇ ಏಕದಿನ ಶತಕವಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now