ದ್ವಾರಕಾ ಪ್ರತಿಷ್ಠಾನದಿಂದ “ನೆಲಪ್ಪಾಲ್ ಉದ್ಯಾನವನ” ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮ ಉದ್ಘಾಟನೆ..!

ದ್ವಾರಕಾ ಪ್ರತಿಷ್ಠಾನದಿಂದ “ನೆಲಪ್ಪಾಲ್ ಉದ್ಯಾನವನ” ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮ ಉದ್ಘಾಟನೆ..!

0Shares

ದಿನಾಂಕ : 09-02-2025 ರಂದು ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನೆಲಪ್ಪಾಲ್ ಉದ್ಯಾನವನ ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಯುತ ಜೀವಂದರ್‌ ಜೈನ್ ಸದಸ್ಯರು, ನಗರಸಭೆ ಪುತ್ತೂರು ಇವರು ಉದ್ಘಾಟಿಸಿ ಮಾತಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಸುಂದರ ಪೂಜಾರಿ ಬಡಾವು, ಪುತ್ತೂರು ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು. ಗಣ್ಯರನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗಣ್ಯರು ಮಾತಾಡುತ್ತಾ ಪುತ್ತೂರು ನಗರದಲ್ಲಿರುವ ಎಲ್ಲಾ ಉದ್ಯಾನವನಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಲಿ ಎಂದು ಆಶಿಸುತ್ತಾ ದ್ವಾರಕಾ ಪ್ರತಿಷ್ಠಾನದ ಈ ಕೆಲಸವನ್ನು ಪ್ರಶಂಶಿಸಿದರು.

ಸಭಾ ಕಾರ್ಯಕ್ರಮದ ನಂತರ ಅಂತರಾಷ್ಟ್ರೀಯ ಮಟ್ಟದ ನೃತ್ಯ ಕಲಾವಿದೆ ವಿದುಷಿ ದಿವ್ಯ ಪ್ರಭಾತ್ ಬೆಂಗಳೂರು ಇವರಿಂದ ನೃತ್ಯೋಲ್ಲಾಸ ಕಾರ್ಯಕ್ರಮ ನಡೆಯಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now