ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

0Shares

ಉಡುಪಿ, ಫೆಬ್ರವರಿ 19 : ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಿವಾಜಿಯ ಜೀವನ ಚರಿತ್ರೆಯನ್ನು ಅವಲೋಕಿಸಿ ಇತಿಹಾಸಕ್ಕೆ ನೀಡಿದ ಅವರ ಕೊಡುಗೆಗಳನ್ನು, ವ್ಯಕ್ತಿತ್ವ ಗುಣಗಳನ್ನು ಅರಿತುಕೊಳ್ಳಬೇಕು. ದೇಶದಲ್ಲೇ ಉತ್ತಮ ಆಡಳಿತ ನೀಡಿದ ಹಿಂದೂ ಮಹಾಕ್ರಾಂತಿಕಾರಿ ಶಿವಾಜಿ ಜಯಂತಿಗೆ ಅರ್ಥಪೂರ್ಣ ಮಹತ್ವ ದೊರೆಯಬೇಕು ಎಂದ ಅವರು, ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಶಿವಾಜಿಯವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು ಎಂದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now