ವಿಶ್ವ ಶ್ರವಣ ದಿನ ಆಚರಣೆ

ವಿಶ್ವ ಶ್ರವಣ ದಿನ ಆಚರಣೆ

0Shares

ಉಡುಪಿ, ಮಾರ್ಚ್ 05 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಹಾಗೂ ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶ್ರವಣ ದಿನಾಚರಣೆಯ ಅಂಗವಾಗಿ ಸೋಮವಾರ ಜಾಥಾ ಕಾರ್ಯಕ್ರಮ, ಮಾಹಿತಿ ಕಾರ್ಯಾಗಾರದೊಂದಿಗೆ ಕಿರುಪ್ರಹಸನ ಪ್ರದರ್ಶಿಸಿ ಜನಜಾಗೃತಿ ಮೂಡಿಸಲಾಯಿತು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರತ್ನ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಆಡಿಯೋಲಾಜಿಸ್ಟ್ ಶಮೀಕ್ಷಾ. ಡಿ.ರಾವ್ ಮಾತನಾಡಿ, ಕಿವಿಯ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು ಅದರಲ್ಲೂ ನವಜಾತ ಶಿಶುಗಳಿಗೆ ಸಂಭಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು. ವಾಕ್ ಮತ್ತು ಶ್ರವಣ ಶಕ್ತಿ ಒಂದಕ್ಕೊಂದು ಪೂರಕವಾಗಿರುವುದರಿಂದ ಕಿವಿ ಕೇಳಿಸದೇ ಇರುವವರಿಗೆ ಮಾತು ಬಾರದಿರುವುದು ಸಾಮಾನ್ಯ ಸಮಸ್ಯೆಯಾಗಿರುತ್ತದೆ. ಈ ಸೂಕ್ಷ್ಮತೆಯನ್ನು ಅರಿಯದ ಬಹಳಷ್ಟು ಜನರು ಶ್ರವಣ ದೋಷವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಈ ಕಾರಣದಿಂದ ಸಣ್ಣ ಸಮಸ್ಯೆ ತೀವ್ರಗೊಂಡು ಶಾಶ್ವತ ಕಿವುಡುತನಕ್ಕೆ ದಾರಿಯಾಗಬಹುದು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಹಾಗೂ ನಿವಾರಣಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಶ್ರೀರಾಮರಾವ್.ಕೆ ಪ್ರಾಸ್ತಾವಿಕ ಮಾತನಾಡಿದರು.

ಉಡುಪಿಯ ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನರ್ಸಿಂಗ್ ಇಲ್ಲಿನ ಪ್ರಾಂಶುಪಾಲೆ ಅನಿತಾ ಸಿ ರಾವ್ ಕರಪತ್ರ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜ್ ಗೋಪಾಲ್ ಭಂಡಾರಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಬಿ.ಎಸ್, ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನರ್ಸಿಂಗ್ ಉಡುಪಿ ಇಲ್ಲಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್.ಹೆಚ್ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ ವಂದಿಸಿದರು.

ವಿಶ್ವ ಶ್ರವಣ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ನಡೆದ ಜಾಥಾವು ನಗರದ ಸರ್ವೀಸ್ ಬಸ್ ಸ್ಟಾ್ಯಂಡಿನಿಂದ ಹೊರಟು ತಾಯಿ ಮತ್ತು ಮಕ್ಕಳ ಆಸ್ಪತ್ರೆಯವರೆಗೆ ಸಾಗಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now