ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ-ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!

ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ-ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!

0Shares

ಕಾಣಿಯೂರು: ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು.

10 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಆರ್ಚಕ ವರ್ಗದವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬಲಡ್ಕ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಚುತ ಗೌಡ ಬಳ್ಳ, ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ನವಜೋಡಿಗಳ ಮನೆಯವರು, ಸ್ನೇಹಿತರು ಭಾಗವಹಿಸಿ ವಧು-ವರರಿಗೆ ಶುಭಹಾರೈಸಿದರು.

ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ನವಜೋಡಿಗಳ ಮನೆಯವರು, ಸ್ನೇಹಿತರು ಭಾಗವಹಿಸಿ ವಧು-ವರರಿಗೆ ಶುಭಹಾರೈಸಿದರು.

ದೇವಳದಿಂದ ಸವಲತ್ತು: ಸರಳ ಸಾಮೂಹಿಕ ವಿವಾಹದಲ್ಲಿ

ವಿವಾಹವಾಗುವವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವತಿಯಿಂದ ವಧುವಿಗೆ ರೂ.48000 ಮೌಲ್ಯದ ತಾಳಿ ಹಾಗೂ ಕಾಲುಂಗುರ, ಸೀರೆ, ರವಿಕೆ, ಹಾರ ಖರೀದಿಸಲು ರೂ.10,000. ಹಾಗೂ ವರನಿಗೆ ಶರ್ಟ್, ವೇಷ್ಟಿ, ಪೇಟ ಖರೀದಿಸಲು ರೂ. 5,000 ಹಣ ನೀಡಲಾಗುತ್ತದೆ.

ಒಟ್ಟು 10 ನವ ಜೋಡಿಗಳು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now