ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

0Shares

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತವೊಂದು ಸಂಭವಿಸಿದ್ದು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.

ಸುಮಾರು 240 ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ, ಸರ್ದಾರ್ ವಲ್ಲಭ ಬಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಹೊರಟ ಕೇವಲ 2 ಕಿಲೋ ಮೀಟರ್ ದೂರದಲ್ಲಿ ಪತನಗೊಂಡಿದೆ. ಅಹಮದಾಬಾದಿನ ಜನ ವಸತಿ ಪ್ರದೇಶ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ. ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ವಿಮಾನದಲ್ಲಿ ಸುಮಾರು 242 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನ ಪತನಗೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now