ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು

ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು

0Shares

ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸೇರಿದಂತೆ ಒಂದು ಗೂಡ್ಸ್‌ ವಾಹನ ಸುಟ್ಟು ಕರಕಲಾಗಿರುವ ಘಟನೆ ಮಂಗಳೂರಿನ ಕ್ಲಾಕ್ ಟವರ್ ಬಳಿ ಶನಿವಾರ (ಜೂ.14) ಮುಂಜಾನೆ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದ್ದು ಘಟನೆಯಲ್ಲಿ ಬಟ್ಟೆ ಅಂಗಡಿ ಮತ್ತು ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದ್ದು ಜೊತೆಗೆ ಒಂದು ಗೂಡ್ಸ್ ವಾಹನವೂ ಬೆಂಕಿ ಅವಘಡದಿಂದ ಸುಟ್ಟು ಕರಕಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now