
ಲೀಡ್ಸ್: ಬಹು ನಿರೀಕ್ಷಿತ ಭಾರತ vs ಇಂಗ್ಲೆಂಡ್
ನಡುವಿನ ಟೆಸ್ಟ್ ಸರಣಿ ಆರಂಭವಾಗಿದೆ. ಐದು ಪಂದ್ಯಗಳ ಆಂಡರ್ಸನ್- ತೆಂಡೂಲ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯವು ಲೀಡ್ಸ್ ನ ಹೇಡಿಂಗ್ಲೆಯಲ್ಲಿ ಆರಂಭವಾಗಿದೆ.
ಸರಣಿಯ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ತಮಿಳುನಾಡು ಬ್ಯಾಟರ್ ಸಾಯಿ ಸುದರ್ಶನ್ ಅವರು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಚೇತೇಶ್ವರ ಪೂಜಾರ ಅವರು ಸುದರ್ಶನ್ ಗೆ ಕ್ಯಾಪ್ ನೀಡಿದರು. ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಹಲವು ಸಮಯದಲ್ಲಿ ಬೆಂಚ್ ಕಾಯುತ್ತಿರುವ ಅಭಿಮನ್ಯು ಈಶ್ವರನ್ ಅವರು ಮತ್ತೆ ಕಾಯಬೇಕಾಗಿದೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ದಿಗ್ಗಜರ ಅನುಪಸ್ಥಿತಿಯಲ್ಲಿ ಭಾರತದ ಯುವಪಡೆಗೆ ಇಂಗ್ಲೆಂಡ್ ಸವಾಲಾಗಲಿದೆ. ನೂತನ ನಾಯಕ ಶುಭಮನ್ ಗಿಲ್ ತನ್ನ ನಾಯಕತ್ವದಲ್ಲಿ ಮೊದಲ ಸರಣಿ ಮುನ್ನಡೆಸುತ್ತಿದ್ದಾರೆ.
ಕನ್ನಡಿಗ ಕರುಣ್ ನಾಯರ್ ಅವರು ಎಂಟು ವರ್ಷಗಳ ಬಳಿಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಯಶಸ್ವಿ ಜೈಸ್ವಾಲ್ ಜೊತೆ ರಾಹುಲ್ ಆರಂಭಿಕರಾಗಿದ್ದಾರೆ. ಗಿಲ್ ನಾಲ್ಕನೇ ಕ್ರಮಾಂಕ, ಪಂತ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಆಲ್ ರೌಂಡರ್ ಕೋಟಾದಲ್ಲಿ ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ಇದ್ದಾರೆ.
ಕನ್ನಡಿಗರಾದ ಕೆಎಲ್ ರಾಹುಲ್, ಕರುಣ್ ನಾಯರ್ ಮತ್ತು ಪ್ರಸಿದ್ ಕೃಷ್ಣ ಆಡುವ ಬಳಗದಲ್ಲಿದ್ದಾರೆ.
ಎರಡು ದಶಕದ ಬಳಿಕ ಟೆಸ್ಟ್ ತಂಡದಲ್ಲಿ ಮೂವರು
ಕನ್ನಡಿಗರು ಆಡುತ್ತಿದ್ದಾರೆ.
ತಂಡಗಳು
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್,
ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಟ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ
ಇಂಗ್ಲೆಂಡ್: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ
ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೆಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























