ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆ

ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆ

0Shares

ಉಡುಪಿ, ಜೂನ್ 24 : ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂಬ ಮಹಿಳೆಯು ಜೂನ್ 14 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು, ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ತೆರಳದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉತ್ತರ ಕರ್ನಾಟಕ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now