ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

0Shares

ತುಮಕೂರು: ಕುಣಿಗಲ್ ಬೈಪಾಸ್‌ನಲ್ಲಿ ಕಾರು

ಹಾಗೂ ಕ್ಯಾಂಟ‌ರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಜೀವ ಕಳೆದುಕೊಂಡಿದ್ದಾರೆ

ಕ್ಯಾಂಟರ್ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು . ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್‌ನವರು ಎಂದು ತಿಳಿದುಬಂದಿದೆ. ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಣಿಗಲ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಸಿಬೇಗೌಡ ಅವರು ಕುಟುಂಬ ಸಮೇತ ಮಾಗಡಿ ಪಟ್ಟಣದಲ್ಲಿ ವಾಸವಾಗಿದ್ದರು. ಸಿಬೇಗೌಡ ಅವರಿಗೆ ಇಬ್ಬರು ಹೆಣ್ಣು ಮಕ್ಕಳು, ಹಾಗೂ ಒಬ್ಬ ಗಂಡು ಮಗ ಇದ್ದನು. ಹಿರಿಯ ಮಗಳಿಗೆ ಮದುವೆ ಮಾಡಲಾಗಿದೆ. ಭಾನುಕಿರಣ್ ಗೌಡ ಕುಣಿಗಲ್ ಬಳಿಯಿರುವ ಅರವಿಂದ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದನು. ಭಾನುವಾರ (ಜೂ.29) ಅರವಿಂದ್ ನನ್ನು ಶಾಲೆಯ ವಸತಿ ನಿಲಯಕ್ಕೆ ಬಿಟ್ಟು ಬರಲು ಸಿದ್ದೇಗೌಡ ಅವರು ಒಂದೇ ಕಾರಿನಲ್ಲಿ ಕುಟುಂಬ ಸಮೇತ ಬಂದಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now