ಜಿಲ್ಲೆಗಳಲ್ಲಿ ಜು.9ರವರೆಗೆ ಹೆಚ್ಚಿನ ಮಳೆ ಸಾಧ್ಯತೆ
Transparent umbrella under heavy rain against water drops splash background. Rainy weather concept.

ಜಿಲ್ಲೆಗಳಲ್ಲಿ ಜು.9ರವರೆಗೆ ಹೆಚ್ಚಿನ ಮಳೆ ಸಾಧ್ಯತೆ

0Shares

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ

ಚುರುಕಾಗಿದ್ದು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಜುಲೈ 9ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಗುರುವಾರ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದ‌ರ್, ಧಾರವಾಡ, ಕಲಬುರಗಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಒಂದು ಅಥವಾ 2 ಸ್ಥಳಗಳಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ 3 ಜಿಲ್ಲೆಗಳು, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಜುಲೈ 9ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕಮಗಳೂರು, ಕೊಡಗು ಹಾಗೂ ಬೆಳಗಾವಿ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನ ಕೆಲವು ಕಡೆ ಜು. 5ರ ವರೆಗೆ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಇನ್ನು ಬೆಂಗಳೂರು, ಮೈಸೂರು, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದಿದ್ದಾರೆ.

ಪ್ರಸ್ತುತ ಕರ್ನಾಟಕದ ಹವಾಮಾನ ವೈಶಿಷ್ಟ್ಯ ಗಮನಿಸಿದರೆ ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಟ್ರಫ್ ಇವೆ. ಇದರ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಜು. 5ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿವೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now