
ಮುಂಬಯಿ, : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಗೆ ಮೂಡುಬಿದಿರೆ ಅಲ್ಲಿನ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಅವರು ಆಯ್ಕೆ ಯಾಗಿದ್ದಾರೆ.
ಶಿಕ್ಷಣ, ಕಲೆ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಅವರು ನಾಡಿಗೆ ನೀಡಿದ ಅತ್ಯಪೂರ್ವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಆ.06ನೇ ಬುಧವಾರ ಮಂಗಳೂರು ಇಲ್ಲಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು .
ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವ ಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸಹಿತ ಗಣ್ಯರನೇಕರು ಭಾಗವಹಿಸಲಿದ್ದಾರೆ ಎಂದು ಸುವರ್ಣ ಸಂಭ್ರಮ ಸಮಿತಿಯ ಪ್ರಧಾನ ಸಂಚಾಲಕ ಪಿ.ಬಿ ಹರೀಶ್ ರೈ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now