
ಉಡುಪಿ, : 12 ನೇ ಶತಮಾನದ ಶಿವಶರಣರಲ್ಲಿ ನುಲಿಯ ಚಂದಯ್ಯ ಸಹ ಒಬ್ಬರು. ಅಂದಿನ ಕಾಲದಲ್ಲಿ ವಚನಕರಾರು ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿದ್ದು, ಕಾಯಕದ ಮಹತ್ವ ವನ್ನು ತಿಳಿಸಿ, ದಾಸೋಹದ ಸಂಪ್ರದಾಯ ವನ್ನು ಬೆಳೆಸುವಲ್ಲಿ ವಚನ ಕಾರರ ಪಾತ್ರ ಅತಿ ಮುಖ್ಯ ವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದರು
ಅವರು ಇಂದು ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ. ಜಿ. ಎ. ವಿ ಹಾಲ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ವಚನ ಸಾಹಿತ್ಯ ಹಾಗೂ ಇನ್ನಿತರ ವಿಷಯಗಳ ಕುರಿತ ಪುಸ್ತಕಗಳನ್ನು ಓದುವುದರೊಂದಿಗೆ, ಜ್ಞಾನ ವನ್ನು ವೃದ್ಧಿಸಿಕೊಂಡು, ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು,ನಾಡು ನುಡಿಗಾಗಿ ಸೇವೆ ಸಲ್ಲಿಸಿದ ಅನೇಕ ಮಹನೀಯರಲ್ಲಿ ನುಲಿಯ ಚಂದಯ್ಯ ಕೂಡ ಒಬ್ಬರಾಗಿದ್ದು, ಶರಣ ಸಂಸ್ಕೃತಿ, ಶರಣರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಹೇಳಿದರು.
ಶರಣರ ಸೇವೆಯನ್ನು ಪ್ರತಿಯೊಬ್ಬರೂ ನೆನೆಯುವಂತಹ ಉದ್ದೇಶದಿಂದ ಸರಕಾರ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬರುತ್ತಿದೆ, ಯುವಜನರು ಸಾಧಕರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದರೊಂದಿಗೆ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನುಲಿಯ ಚಂದಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ. ಜಿ, ಐ. ಕ್ಯೂ. ಎ. ಸಿ ಘಟಕದ ಸಂಚಾಲಕಿ ಶ್ರೀಮತಿ ಅಡಿಗ, ಉಪನ್ಯಾಸಕರು, ವಿದ್ಯಾರ್ಥಿಗಳು, ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ವರ್ಷಾ ಬಿ ಕೋಟ್ಯಾನ್ ನಿರೂಪಿಸಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ನಿಕೇತನ ವಂದಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now