
ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಆ.29 ರಿಂದ 31ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಛತ್ತೀಸ್ಘರ್ದಲ್ಲಿ ಲೋ ಫ್ರೆಜರ್ ಸಿಸ್ಟೆಮ್ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲೆಗಳಲಿ ಆ.28 ರಿಂದ ಸೆ.3ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಳಗಾವಿ, ಬೀದರ್, ಮೆರಗಿ, ಚಿಕ್ಕಮಗಳೂರು,ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆ.29ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ, ವಿಜಯಪುರ, ಯಾದಗಿರಿ, ಹಾಸನ ಜಿಲ್ಲೆಗಳಿಗೆ ಆ.29ರಂದು ಹಳದಿ ಅಲೆರ್ಟ್ ಘೋಷಣೆ ಮಾಡಲಾಗಿದೆ.
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ:
ಸೆ.1ರ ವರೆಗೆ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಮೀನುಗಾರರು ಈ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now