
ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ, ಗಂಗೊಳ್ಳಿಯ ಕೊಸೆಸಾಂವ್ ಮಾತೆಯ ಚರ್ಚಿನಲ್ಲಿ ಕರ್ನಾಟಕ ಸರಕಾರ ನಡೆಸುವಂತಹ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ಆದಿತ್ಯವಾರ ಸೆಪ್ಟೆಂಬರ್ 21 ರಂದು ನಡೆಯಿತು.
ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಇವರ ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ರವರ ಮುಂದಾಳತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ , ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿಯ ಅಧಿಕಾರಿ ಹಾಗೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ತರಬೇತುದಾರರಾದ ಶ್ರೀ ಮಿಲ್ಟನ್ ಕ್ರಾಸ್ತಾರವರು ಸಂಪನ್ಮೂಳ ವ್ಯಕ್ತಿಗಳಾಗಿ ಆಗಮಿಸಿ ಸಮೀಕ್ಷೆಯ ಬಗ್ಗೆ ಆಮೂಲಾಗ್ರ ಮಾಹಿತಿಯನ್ನು ನೀಡಿ, ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ, ಸೂಕ್ತ ಮಾಹಿತಿಯನ್ನು ನೀಡುವಂತೆ ಕರೆ ನೀಡಿ, ಸಭಿಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಸಂಶಯಗಳನ್ನು ದೂರ ಮಾಡಿದರು.
ಗಂಗೊಳ್ಳಿ ಕೊಸೆನಾಂವ್ ಮಾತೆ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜರವರು ಈಗ ನಡೆಯುತ್ತಿರುವ ಸಮೀಕ್ಷೆಯಲ್ಲಿ ನಮ್ಮ ಜವಾಬ್ದಾರಿಯನ್ನು ಅರಿತು ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿ, ಸಂಪನ್ನೂಳ ವ್ಯಕ್ತಿಗಳನ್ನು ಸ್ವಾಗತಿಸಿ, ಅವರನ್ನು ಗೌರವಿಸಿದರು.
ಶ್ರೀ ವಿಲ್ಸನ್ ಡಾಯಸ್ ಸಂಪನ್ಮೂಳ ವ್ಯಕ್ತಿಗಳಾದ ಶ್ರೀ ಮಿಲ್ಟನ್ ಕ್ರಾಸ್ತಾರವರ ವ್ಯಕ್ತಿಪರಿಚಯ ನೀಡಿದರೆ, ಖಜಾಂಚಿ ಶ್ರಿಮತಿ ರೆನಿಟಾ ಬಾರ್ನೆಸ್ ಹಾಗೂ ಕಾರ್ಯದರ್ಶಿ ಶ್ರೀ ಸೈಮನ್ ಡಿಸೋಜ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.



Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now