
ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ಡಾ|| ಎಸ್.ಎಲ್. ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಇವರಿಗೆ ಸಲ್ಲುತ್ತದೆ
ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. . ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now