ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – ʼಸಾಹಿತ್ಯ ಭಂಡಾರʼ ಕಾರ್ಯಕ್ರಮ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – ʼಸಾಹಿತ್ಯ ಭಂಡಾರʼ ಕಾರ್ಯಕ್ರಮ

0Shares

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಎಂ.ಸಿ.ಸಿ. ಬ್ಯಾಂಕ್‌ ಲಿ., ಹಂಪನ್‌ಕಟ್ಟಾ ಇದರ ಸಭಾಂಗಣದಲ್ಲಿ ದಿನಾಂಕ 19.10.2025ರಂದು ಸಾಹಿತ್ಯ ಭಂಡಾರ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಕ್ಷೇತ್ರಗಳಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಲು, ಸರ್ಕಾರವು ಕೊಂಕಣಿ ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿದೆ. ಕೊಂಕಣಿಯಲ್ಲಿ ವಿವಿಧತೆಯನ್ನು ಕಾಪಾಡಲು ಹಾಗೂ ಕೊಂಕಣಿಯ ಶ್ರೀಮಂತಿಕೆಯನ್ನು ಹೆಚ್ಚಿಸಲು ಅಕಾಡೆಮಿಯು ನಿರಂತರವಾಗಿ ಕೆಲಸ ಮಾಡುತ್ತಿದೆ. ಅಕಾಡೆಮಿಯು ಸಾಹಿತಿಗಳಿಂದ ಪುಸ್ತಕಗಳನ್ನು ಪಡೆದು, ಪರಿಶೀಲಿಸಿ, ಸೂಕ್ತ ಪುಸ್ತಕಗಳನ್ನು ಆಯ್ದು, ಪ್ರಕಟಿಸಿ ಸಾಹಿತಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಅಕಾಡೆಮಿಯು ಹಿರಿಯ ಸಾಹಿತಿಗಳನ್ನು ಭೇಟಿ ಮಾಡಿ, ಅವರನ್ನು ಗೌರವಿಸುತ್ತಾ ಬಂದಿದೆ. ಯಾರಾದರೂ ಹಿರಿಯ ಸಾಹಿತಿಗಳಿದ್ದಲ್ಲಿ ನಮಗೆ ತಿಳಿಸಿ, ಅವರನ್ನು ಖಂಡಿತ ಭೇಟಿ ಮಾಡುತ್ತೇವೆʼ ಎಂದು ಹೇಳಿ ಎಲ್ಲರನ್ನೂ ಸ್ವಾಗತಿಸಿದರು

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಜವಹರ್‌ಲಾಲ್‌ ನೆಹ್ರು ವಿಶ್ವವಿದ್ಯಾಲಯ ನ್ಯೂಡೆಲ್ಲಿ ಇಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಶ್ರೀಯುತ ಪ್ರೊಫೆಸರ್‌ ವಲೇರಿಯನ್‌ ರೊಡ್ರಿಗಸ್‌ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರು ಮಾತಾನಾಡಿ, ನನ್ನ ಮಾತೃಭಾಷೆ ಹಾಗೂ ನಾನು ಮನೆಯಲ್ಲಿ ಮಾತಾನಾಡುವ ಭಾಷೆ ಕೊಂಕಣಿ. ಭಾರತದಲ್ಲಿ ಕೊಂಕಣಿ ಮಾತಾನಾಡುವ ಜನಸಂಖ್ಯೆ ಕಡಿಮೆಯಿದ್ದರೂ ಸಾಹಿತ್ಯ ಕ್ಷೇತ್ರದಲ್ಲಿ ತುಂಬಾ ಸಾಹಿತಿಗಳು ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಸಾಹಿತಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಕೊಂಕಣಿ ಅಕಾಡೆಮಿಯು ಮಾಡುತ್ತಾ ಬಂದಿದೆ, ಎಂದು ಹೇಳಿ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು.

ಖ್ಯಾತ ಕೊಂಕಣಿ ಸಾಹಿತಿಗಳು ಬರೆದ ಕೊಂಕಣಿಯ 9 ಪುಸ್ತಕಗಳು ವಿಮೋಚನೆಗೊಂಡವು. ಎಲ್ಲಾ ಸಾಹಿತಿಗಳ ಪರವಾಗಿ ಶ್ರೀ ಜ್ಯೋ ಲೋಬೊರವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಶ್ರೀಮತಿ ಲಿಲ್ಲಿ ಮಿರಾಂದಾರವರು 2016ರಲ್ಲಿ ಕನ್ನಡದಿಂದ ಕೊಂಕಣಿಗೆ ಅನುವಾದಿಸಿದ ಪೂರ್ಣಚಂದ್ರ ತೇಜಸ್ವಿಯವರ ʼಕರ್ವಾಲೊʼ ಪುಸ್ತಕದ ಇ-ಬುಕ್‌ ಆವೃತ್ತಿಯನ್ನು ದಾಯ್ಜಿವರ್ಲ್ಡ್‌ ಸಂಸ್ಥಾಪಕರಾದ ಶ್ರೀ ವಾಲ್ಟರ್‌ ನಂದಳಿಕೆರವರು ಬಿಡುಗಡೆಗೊಳಿಸಿದರು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್‌ ಲೋಬೊರವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now