ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ

ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ

0Shares

ಉಡುಪಿ ಅಕ್ಟೋಬರ್ 27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ, ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಆದಿ ಉಡುಪಿ ಪ್ರೌಢ ಶಾಲೆ ಆದಿಉಡುಪಿ ಮತ್ತು ಆದಿಉಡುಪಿ ಆಂಗ್ಲಮಾಧ್ಯಮ ಶಾಲೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಆದಿ ಉಡುಪಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಹಾಗೂ ಸಪ್ತಾಹ ಇದರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀ ರಾಮ್ ರಾವ್ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸೂಕ್ಷಾ್ಮಣು ಜೀವಿ ಶಾಸ್ತ್ರಜ್ಞೆ ಸುಮಾ ಹೆಗ್ಡೆ ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನ್ಯತೆಗಳು ಹಾಗೂ ಅಯೋಡಿನ್ ಯುಕ್ತ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ  ಮಾತನಾಡಿದರು.

ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷೆ್ಯ ತಾರಾ ಉಮೇಶ್ ನಾಯಕ್ ಕರಪತ್ರ ಬಿಡುಗಡೆಗೊಳಿಸಿದರು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅಕ್ಷತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇದರ ಪಧಾಧಿಕಾರಿ ರವಿರಾಜ್ ನಾಯಕ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ತೆರೆಸಾ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಶಾಲೆಯ ಸಂಚಾಲಕರು, ಪ್ರಾಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶಿಲ್ಪಶ್ರೀ ನಿರೂಪಿಸಿ, ಶಶಿಧರ್ ಹೆಚ್ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now