ಅಥ್ಲೆಟಿಕ್ಸ್‌ನಲ್ಲಿ ಕೆಪಿಎಸ್ ಕೋಟೇಶ್ವರ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ.

ಅಥ್ಲೆಟಿಕ್ಸ್‌ನಲ್ಲಿ ಕೆಪಿಎಸ್ ಕೋಟೇಶ್ವರ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ.
0Shares

ಕೋಟೇಶ್ವರ ವೃತ್ತ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಕೋಟೇಶ್ವರದ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಮರ್ಥ್ 100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ.ರುದ್ರ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ .ಶ್ರೇಯಸ್ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ. ಪ್ರಥಮ್ 400 ಮೀಟರ್ ಹಾಗೂ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ . ಪ್ರಣಮ್ ಗುಂಡೆಸೆತದಲ್ಲಿ ದ್ವಿತೀಯ ಹಾಗೂ ಸುಶಾಂತ್ ಗುಂಡೆಸೆತದಲ್ಲಿ ತೃತೀಯ ಸ್ಥಾನ ಗಳಿಸಿದರು.

17 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಮೃದ್ಧಿ ಗುಂಡೆಸೆತದಲ್ಲಿ ಪ್ರಥಮ ಹಾಗೂ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದರು.ವೈಷ್ಣವಿ ಎತ್ತರಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ಅವನಿ 100 ಮೀಟರ್ ಓಟ ಹಾಗೂ ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದರು.

14 ರ ವಯೋಮಾನದ ಬಾಲಕರ ವಿಭಾಗದಲ್ಲಿ ನಿಗಮ್ ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಗುಂಡೆಸೆತದಲ್ಲಿ ತೃತೀಯ ಸ್ಥಾನ ಗಳಿಸಿದರು.ಕಬೀರ್ ಗುಂಡೆಸೆತ ಮತ್ತು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದರು. ಸಮರ್ಥ್ ಆಚಾರ್ಯ 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದರು.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ
ಪೃಥ್ವಿ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಹಾಗೂ ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದರು. ಐಶ್ವರ್ಯ ಉದ್ದಜಿಗಿತದಲ್ಲಿ ಪ್ರಥಮ ಹಾಗೂ ಎತ್ತರಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದರು. ಶ್ರೀರಿಮಾ 600 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಎತ್ತರಜಿಗಿತದಲ್ಲಿ ತೃತೀಯ ಸ್ಥಾನ ಗಳಿಸಿದರು.

ರಿಲೇ ಓಟದಲ್ಲಿ
14ರ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನ 17ರ ವಯೋಮಾನದ ಬಾಲಕರ ತಂಡ ದ್ವಿತೀಯ, 17ರ ವಯೋಮಾನದ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಕೋಟೇಶ್ವರದ ಉಪಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು, ಅಧ್ಯಾಪಕ ವೃಂದ, ಎಸ್‌ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now