ರಾಜ್ಯದಲ್ಲಿ ಶುರುವಾಯ್ತು ಗುಟ್ಕಾ, ಅಮಲು ಬೇಟೆ

ರಾಜ್ಯದಲ್ಲಿ ಶುರುವಾಯ್ತು ಗುಟ್ಕಾ, ಅಮಲು ಬೇಟೆ
0Shares

ಬೆಂಗಳೂರು: ಕಿಂಚಿತ್ ಅಮಲು ಪದಾರ್ಥ ಬೆರಕೆ

ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಬುಧವಾರ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ವಿವಿಧೆಡೆ ಕಾರ್ಯಾಚರಣೆ ನಡೆಸಿ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಪ್ರಮುಖವಾಗಿ, ಬೆಂಗಳೂರು, ಮೈಸೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಪಾನ್ ಮಸಾಲಾ ಮಾರಾಟ ಮಳಿಗೆಗಳಿಂದ ಮಾದರಿ ಸಂಗ್ರಹಿಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಪೈಕಿ ಬುಧವಾರ ಕೆಲವು ಮಳಿಗೆಗಳಿಂದ 32 ಸ್ಯಾಂಪಲ್ಸ್ ಸಂಗ್ರಹಿಸಿದ್ದು, ಗುರುವಾರವೂ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಗಳಿವೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now