ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ ನೇಮಕ

ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ ನೇಮಕ
0Shares

ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ (ರಿ), ಬೆಂಗಳೂರು ವತಿಯಿಂದ ಪತ್ರಕರ್ತೆ ಅನುಷಾ ಆಚಾರ್ ಪಳ್ಳಿ ಅವರನ್ನು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಪ್ರೆಸ್ ಕ್ಲಬ್‌ನ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಂಚಾಲಕರಾದ ರೂಪೇಶ್ ಕಲ್ಮಾಡಿ ಹಾಗೂ ಉಡುಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಮಾರ್ ಸೂಚನೆಯ ಮೇರೆಗೆ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ಅನುಷಾ ಆಚಾರ್ ಪಳ್ಳಿ ಅವರ ನೇಮಕಾತಿಗೆ ಅಧಿಕೃತ ಆದೇಶ ನೀಡಿದ್ದಾರೆ.

ನೇಮಕಾತಿ ಆದೇಶದಲ್ಲಿ ಪತ್ರಿಕಾ ಕ್ಷೇತ್ರದ ನ್ಯಾಯ, ನೀತಿ, ಸತ್ಯ ಮತ್ತು ಪತ್ರಿಕಾ ಧರ್ಮದ ಮೌಲ್ಯಗಳನ್ನು ಪಾಲಿಸಿಕೊಂಡು ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕರ್ನಾಟಕ ಪ್ರೆಸ್ ಕ್ಲಬ್‌ನ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪತ್ರಕರ್ತರು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಅವರಿಗೆ ಅಗತ್ಯವಾದ ಸಹಾಯ-ಸಹಕಾರ ಒದಗಿಸುವುದು ಹಾಗೂ ಪತ್ರಕರ್ತರ ಹಕ್ಕು ಮತ್ತು ಹಿತಾಸಕ್ತಿಗಳ ಪರವಾಗಿ ಧ್ವನಿ ಎತ್ತುವುದು ಅವರ ಪ್ರಮುಖ ಜವಾಬ್ದಾರಿಗಳಲ್ಲಿ ಒಂದಾಗಿರಲಿದೆ ಎಂದು ತಿಳಿಸಲಾಗಿದೆ.

ಅದೇ ರೀತಿ, ಸಮಾಜದ ದುರ್ಬಲ ಹಾಗೂ ಬಡ ವರ್ಗದ ಜನರ ಸಮಸ್ಯೆಗಳಿಗೆ ಧ್ವನಿಯಾಗುವುದರೊಂದಿಗೆ, ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಹೊಸ ಜವಾಬ್ದಾರಿಯೊಂದಿಗೆ ರಾಜ್ಯಾದ್ಯಂತ ಪತ್ರಕರ್ತರ ಸಂಘಟನೆ ಮತ್ತು ಅವರ ಹಿತಾಸಕ್ತಿಗಳಿಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ವ್ಯಕ್ತಪಡಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now