
ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ 76 ವರ್ಷದ ಸ್ವಾಮೀಜಿ ಸಿದ್ದಲಿಂಗಶ್ರೀ ಲಿಂಗೈಕ್ಯರಾಗಿದ್ದಾರೆ
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ 76 ವರ್ಷದ ಸ್ವಾಮೀಜಿ ಸಿದ್ದಲಿಂಗಶ್ರೀ ಲಿಂಗೈಕ್ಯರಾಗಿದ್ದಾರೆ
ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.
ನಾಳೆ ಮಠದ ಆವರಣದಲ್ಲಿ ಸ್ವಾಮೀಜಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 4 ಗಂಟೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now