
ಬೆಂಗಳೂರು: ಕಾಡುಹಂದಿಯನ್ನು ಬೇಟೆಯಾಡಿ ಕೊಂದು, ಅದರ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಇಲಾಖೆ ಬಂಧಿಸಿದೆ. ಬಂಧಿತರನ್ನು ಮಾದಯ್ಯ (36) ಮತ್ತು ಮುತ್ತುರಾಜ್ (19) ಎಂದು ಗುರುತಿಸಲಾಗಿದೆ.
ಕಗ್ಗಲಿಪುರ ಅರಣ್ಯಾಧಿಕಾರಿ ಕಾಂಬ್ಳೆ ಹಾಗೂ ಸಿಬ್ಬಂದಿ ತಾವರೆಕೆರೆ ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಸುಮಾರು 7 ಕೆ.ಜಿ. ಕಾಡುಹಂದಿ ಮಾಂಸ ವಶಪಡಿಸಿಕೊಳ್ಳಲಾಗಿದ್ದು, ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ಸ್ಕೂಟರ್‌ನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now