
ಮಂಗಳೂರು, ಲೋಬೊ ಫೌಂಡೇಶನ್ ಮುಂಬಯಿ ಹಾಗೂ ಗ್ಲೋಬಲ್ ಸಿಂಪಥಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಬಿಜೈ ಕಾಪಿಕಾಡ್ ಅಂಗನವಾಡಿ ಶಾಲೆಯ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆಗಳು ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

ಇದೇ ವೇಳೆ ಶಾಲಾ ಮಕ್ಕಳ ಶೈಕ್ಷಣಿಕ ಕಲಿಕೆಗೆ ಅಗತ್ಯವಿರುವ ಇಂಟರ್‌ನೆಟ್ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ರೋನ್ಸ್ ಬಂಟ್ವಾಳ್ ತಿಳಿಸಿದರು.
ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ ನೀಡಲಾಗುವುದು ಹಾಗೂ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಸಮವಸ್ತ್ರ ಒದಗಿಸುವುದಾಗಿ ಅಂತಾರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ರಾಜ್ಯ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್. ಬಂಗೇರಾ ತಿಳಿಸಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾ ಶಿಕ್ಷಕಿಯರಾದ ನಂದಾ, ಲಕ್ಷ್ಮೀ ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now