
ಬೆಳಗಾವಿ : ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುದಾನ ತಂದಿರುವ ಕ್ರೆಡಿಟ್ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಸಂಸದ ಜಗದೀಶ ಶೆಟ್ಟರ್ ಗೆ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.
ಪರಿಸರವಾದಿಗಳ ಹೋರಾಟ ಗೋವಾ ಪ್ರಾಯೋಜಿತ ಎನ್ನುವ ಆರೋಪವಿದೆಯಲ್ಲ ಎನ್ನುವ ಪ್ರಶ್ನೆಗೆ, ಇದು ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಷಯ ಮಾತನಾಡುವುದಿಲ್ಲ ಎಂದು ತಿಳಿಸಿದರು.
ಶಕ್ತಿ ತುಂಬುವ ವಿಶ್ವಾಸವಿದೆ
ಸರಕಾರ 2 ವರ್ಷ ಪೂರೈಸಿರುವ ಸಂದರ್ಭದಲ್ಲಿ ಜನರಿಗೆ ಏನು ಹೇಳಲು ಬಯಸುತ್ತೀರಿ ಎಂದು ಕೇಳಿದಾಗ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, ಸಿದ್ದಾಂತದಿಂದ ಆಡಳಿತ ನಡೆಸುತ್ತಿದೆ. ನಾವು ಚುನಾವಣೆಗೆ ಮುನ್ನ ನೀಡಿದ ಎಲ್ಲ ವಾಗ್ದಾನಗಳನ್ನೂ ಈಡೇರಿಸಿದ್ದೇವೆ. ಹಾಗಾಗಿ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ಭರವಸೆ ಇದೆ ಎಂದರು.
ನಾವು ಅಧಿಕಾರಕ್ಕೆ ಬಂದ ತಕ್ಷಣ ಸಂವಿಧಾನ ಪೀಠ ಓದು ಜಾರಿಗೆ ತಂದಿದ್ದೇವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವುದು ನಮ್ಮ ತತ್ವ. ಮಹಿಳೆಯರ ಸಬಲೀಕರಣ ಗುರಿ ಇಟ್ಟುಕೊಂಡು ಹಲವಾರು ಯೋಜನೆ ತಂದಿದ್ದೇವೆ. ಈ ದಿಸೆಯಲ್ಲಿ ದೃಢ ಹೆಜ್ಜೆ ಇಟ್ಟಿದ್ದೇವೆ ಎಂದು ಅವರು ಹೇಳಿದರು.
ಗೃಹ ಲಕ್ಷ್ಮೀ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ಸಚಿವರು ತಿಳಿಸಿದರು.
ಸಂಪುಟ ವಿಸ್ತರಣೆ, ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಅವರು ಎಲ್ಲ ಶಾಸಕರ ಅಭಿಪ್ರಾಯ ಪಡೆದು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧಳಾಗಿ ನಡೆದುಕೊಳ್ಳುವವಳು, ಶಿಸ್ತು ಪಾಲಿಸುವವಳು. ಈ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























