
ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ
ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ಅಕ್ರಮವಾಗಿ ನಾಲ್ಕು ಆಮೆಯನ್ನು ಬೇಟೆಯಾಡಿ ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14 ರಂದು ಸಂಜೆ 3:30 ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ದಾಳಿ ಮಾಡಿ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.
ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯವರು ಫೆ.14 ರಂದು ಸಂಜೆ ಬೆಳ್ತಂಗಡಿ ಪೊಲೀಸರಿಂದ ಮಹಜರು ಮಾಡಿ ನಾಲ್ಕು ಸುಟ್ಟಿರುವ ಆಮೆಗಳು ಮತ್ತು ನಾಲ್ಕು ಮಂದಿ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಅಂಚೆ,ಪೆರ್ಡಲ್ ಗ್ರಾಮದ ನಿರ್ಜಲ್ ನಿವಾಸಿ ಮಣಿಕಂಠ(42), ಮಂಗಳೂರು ನಗರದ ಮುಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಶ್ಲೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35) ಎಂಬವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಲ್ಕು ಮಂದಿ ಆರೋಪಿಗಳಾದ ಮಣಿಕಂಠ, ರಾಜೇಂದ್ರ, ವಿಶ್ಲೇಶ್, ಪ್ರಶಾಂತ್ ಇವರು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ ಸಂಬಂಧಿ ಅಜ್ಜಿಯಾದ ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಫೆ.13 ರಂದು ಆಗಮಿಸಿದ್ದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now