
ದೆಹಲಿ : ಭಾರತೀಯ ಜನತಾ ಪಕ್ಷದ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಮೊಗವೀರ ಸಮಾಜದ ಪ್ರಭಾವಿ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬೀನ್ ಶನಿವಾರ ಆದೇಶ ಹೊರಡಿಸಿದ್ದಾರೆ.
2013 ರಿಂದ 2018 ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿ , ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದರು.
2022ರಲ್ಲಿ ಬಿಜೆಪಿ ಸೇರ್ಪಡೆಗೊಂಡರೂ ವಿಧಾನಸಭಾ, ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ ಗೆ ಅವಕಾಶ ದೊರಕಿರಲಿಲ್ಲ. ಆದರೂ ಪಕ್ಷ ನಿಷ್ಠೆಯಿಂದ ವಿವಿಧ ಜವಾಬ್ದಾರಿಗಳನ್ನು ಬೇರೆಬೇರೆ ಚುನಾವಣೆಯಲ್ಲಿ ಯಶಸ್ವಿಯಾಗಿ ನಿಭಾಯಿಸಿದರು. ಇದೀಗ ಪಕ್ಷ ಪ್ರಮುಖ ಜವಾಬ್ದಾರಿಯನ್ನು ಪ್ರಮೋದ್ ಮಧ್ವರಾಜ್ ಹೆಗಲಿಗೆ ನೀಡಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now