
ಬ್ರಹ್ಮಾವರ: ಕರ್ನಾಟಕ ಪಬ್ಲಿಕ್ ಸ್ಕೂಲ್, ಬ್ರಹ್ಮಾವರದ 8ನೇ ತರಗತಿ ವಿದ್ಯಾರ್ಥಿನಿ ಕು. ಲಾಸ್ಯ ಶೆಟ್ಟಿ ಅವರು ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮಹೇಶ್ ಶೆಟ್ಟಿ ಮತ್ತು ದೀಪಿಕಾ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ಲಾಸ್ಯ ಅವರು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, SDMC, PTA ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now