ಸ್ಪೋಟಕ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿ
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.