ಕಥೋಲಿಕ್ ಸಭಾ ಉಡುಪಿ ಪ್ರದೇಶ್ : ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ಫಾ. ಅನಿಲ್ ಡಿಸೋಜಾ ಆಯ್ಕೆ

ಕಥೋಲಿಕ್ ಸಭಾ ಉಡುಪಿ ಪ್ರದೇಶ್ : ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ಫಾ. ಅನಿಲ್ ಡಿಸೋಜಾ ಆಯ್ಕೆ
0Shares

ಉಡುಪಿ : ಕಥೋಲಿಕ ಕ್ರೈಸ್ತರ ಬಲಿಷ್ಠ ಸಂಘಟನೆಯಾಗಿರುವ ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಇದರ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ವo. ಫಾ. ಅನಿಲ್ ಡಿಸೋಜಾ ಆಯ್ಕೆಯಾಗಿದ್ದಾರೆ.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿರುವ ಡಾ. ಲೆಸ್ಲಿ ಡಿಸೋಜಾ, ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ಅಧಿಕಾರ ಅವಧಿಯ ಬೋಧನೆ ಮಾಡಿದ್ದು, ಫಾ. ಅನಿಲ್ ಡಿಸೋಜಾ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಮಾತ್ರವಲ್ಲದೆ ಧರ್ಮಪ್ರಾಂತ್ಯದ ಶ್ರೀಸಾಮಾನ್ಯ ಆಯೋಗದ ನಿರ್ದೇಶಕರಾಗಿಯೂ ಜವಾಬ್ದಾರಿಯನ್ನು ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವo. ಫಾ. ಸ್ಟೀವನ್ ಡಿಸೋಜಾ ಉಪಸ್ಥಿತರಿದ್ದರು.

ಕಳೆದ ಹಲವು ವರ್ಷಗಳಿಂದ ವo. ಫಾ. ಫರ್ಡಿನಂಡ್ ಗೊನ್ಸಲ್ವಿಸ್ ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ಆಧ್ಯಾತ್ಮಿಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ವo. ಫಾ. ಅನಿಲ್ ಡಿಸೋಜಾ ಮೂಲತಃ ಶಿರ್ವದವರಾಗಿದ್ದು, ಉಡುಪಿ, ಮಂಗಳೂರು ಧರ್ಮ ಪ್ರಾಂತ್ಯದ ವಿವಿಧ ದೇವಾಲಯಗಳಲ್ಲಿ ಧರ್ಮ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now