‘ಕಾಂತಾರ ಚಾಪ್ಟರ್ 1’ ಸೆಟ್‌ನಲ್ಲಿ ಮತ್ತೊಂದು ಭಾರಿ ಅವಘಡ..!!!

‘ಕಾಂತಾರ ಚಾಪ್ಟರ್ 1’ ಸೆಟ್‌ನಲ್ಲಿ ಮತ್ತೊಂದು ಭಾರಿ ಅವಘಡ..!!!

0Shares

ಕಾಂತಾರ: ಚಾಪ್ಟರ್ 1′ ಸಿನಿಮಾದ ಚಿತ್ರೀಕರಣ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಸಿನಿಮಾ ಶೂಟಿಂಗ್‌ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್‌ನಲ್ಲಿ ಸಂಭವಿಸಿದೆ. ಆದರೆ ಯಾವುದೇ ಪ್ರಾಣಾಪಾಯ ನಡೆದಿರುವ ವರದಿ ಆಗಿಲ್ಲ.

ಕಾಂತಾರ ಚಾಪ್ಟರ್ 1′ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್‌ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ, ಈಗಾಗಲೇ ಹೆದರಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡವನ್ನು ಮತ್ತಷ್ಟು ಹೆದರಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now