ಕುಂದಾಪುರ : ನವೆಂಬರ್ 22 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಉತ್ಸವವನ್ನು ಸರಕಾರಿ ಪ್ರೌಢಶಾಲೆ ಬೇಳೂರು ಇಲ್ಲಿನ ವಿಜ್ಞಾನ ಶಿಕ್ಷಕರಾದ ಉದಯ ಗಾಂವಕಾರ ಉದ್ಘಾಟಿಸಿ , ವಿಜ್ಞಾನ ಯೋಚಿಸುವ ವಿಧಾನವನ್ನು ಬದಲಾಯಿಸುತ್ತದೆ. ವಿಜ್ಞಾನ ಅಂದರೆ ಪ್ರಶ್ನೆ ಮಾಡುವುದು, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪ್ರಶ್ನೆ ಮಾಡುವುದರ ಮೂಲಕ ಹೊಸತನವನ್ನು ಕಂಡು ಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಹೆಮ್ಮಾಡಿ ಇಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟನ ಕಾರ್ಯದರ್ಶಿ ಶ್ರೀ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ವಿಜ್ಞಾನ ಉತ್ಸವದ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು , ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವಂದಿಸಿದರು. ವಿದ್ಯಾರ್ಥಿನಿಯರಾದ ಶುಕ್ತಿಜಾ, ವೈಷ್ಣವಿ ಆರ್. ಕೆ ಅತಿಥಿಗಳನ್ನು ಪರಿಚಯಿಸಿದರು.
ಅದಿತಿ ಕಾರ್ಯಕ್ರಮವನ್ನು ನಿರೂಪಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now